Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್‍ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೊಲೊಮೋನನು ಇಸ್ರೇಲಿನ ದೇವರಾದ ಯೆಹೋವನನ್ನು ಅನುಸರಿಸದೆ ಬೇರೆ ಕಡೆಗೆ ತಿರುಗಿಕೊಂಡನು. ಆದ್ದರಿಂದ ಯೆಹೋವನು ಸೊಲೊಮೋನನ ಮೇಲೆ ಕೋಪಗೊಂಡನು. ಯೆಹೋವನು ಎರಡು ಸಲ ಸೊಲೊಮೋನನಿಗೆ ದರ್ಶನವನ್ನು ನೀಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷರಾಗಿದ್ದರೂ, ಅವನ ಹೃದಯವು ದೇವರಿಂದ ತಿರುಗಿ ಹೋದುದರಿಂದ, ಅವನ ಮೇಲೆ ಕೋಪಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:9
20 ತಿಳಿವುಗಳ ಹೋಲಿಕೆ  

ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.


ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,


ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.


ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.


ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.


ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.


ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.


ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.


ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.


ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.


ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು