Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ಶೆಕೆವಿುಗೆ ಹೋದನು; ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:1
14 ತಿಳಿವುಗಳ ಹೋಲಿಕೆ  

ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.


ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.


ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು