Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು,’ ಎಂಬುದಾಗಿ ಹೇಳಬೇಕು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ತಂದೆಯು ಹೆಚ್ಚು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ಆದರೆ ನಾನು ಮತ್ತಷ್ಟು ಕಷ್ಟದ ಕೆಲಸಗಳನ್ನು ನಿಮ್ಮಿಂದ ಮಾಡಿಸುತ್ತೇನೆ. ನಿಮ್ಮಿಂದ ಕೆಲಸ ಮಾಡಿಸಲು ನಮ್ಮ ತಂದೆಯು ಚಾವಟಿಗಳಿಂದ ನಿಮ್ಮನ್ನು ಹೊಡೆಸಿದನು. ನಾನಾದರೋ ನಿಮ್ಮನ್ನು ಮುಳ್ಳುಕೋಲುಗಳಿಂದ ಮತ್ತಷ್ಟು ಕಠಿಣವಾಗಿ ಹೊಡೆಸುತ್ತೇನೆ’ ಎಂದು ತಿಳಿಸು” ಎಂಬುದಾಗಿ ಹೇಳಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:11
14 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.


ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.


ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು.


ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.


ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.


ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು