1 ಅರಸುಗಳು 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಅಧ್ಯಾಯವನ್ನು ನೋಡಿ |