Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸ ರೆಹಬ್ಬಾಮನು ಬೇಗನೇ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲ್ಯರ ಬಳಿಗೆ ಕಳುಹಿಸಲು ಅವರು ಇವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೇ ರಥವನ್ನೇರಿ ಯೆರೂಸಲೇವಿುಗೆ ಓಡಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದೋರಾಮನೆಂಬ ಹೆಸರಿನ ಮನುಷ್ಯನು ಕೆಲಸಗಾರರ ಮೇಲ್ವಿಚಾರಕನಾಗಿದ್ದನು. ರಾಜನಾದ ರೆಹಬ್ಬಾಮನು ಜನರೊಂದಿಗೆ ಮಾತನಾಡಲು ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರೇಲಿನ ಜನರು ಅವನು ಸಾಯುವವರೆಗೆ ಅವನ ಕಡೆಗೆ ಕಲ್ಲುಗಳನ್ನು ಎಸೆದರು. ಆಗ ರೆಹಬ್ಬಾಮನು ತನ್ನ ರಥವನ್ನು ಹತ್ತಿ ತಪ್ಪಿಸಿಕೊಂಡು, ಜೆರುಸಲೇಮಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:18
12 ತಿಳಿವುಗಳ ಹೋಲಿಕೆ  

ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.


ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.


ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.


ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.


ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.


ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು