Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸೊಲೊಮೋನನ ಮಗ ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ರಾಜ್ಯವನ್ನು ಮರಳಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಒಂದು ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನಗೆ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್‍ಕುಲಗಳಿಂದ ಲಕ್ಷದ ಎಂಭತ್ತುಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:21
8 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.


ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.


ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು