1 ಅರಸುಗಳು 12:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.