Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 (ಇದು ಪಾಪಕ್ಕೆ ಕಾರಣವಾಯಿತು.) ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಇದು ಮಹಾ ಪಾಪವಾಗಿತ್ತು. ಇಸ್ರೇಲಿನ ಜನರು ಕರುಗಳನ್ನು ಆರಾಧಿಸಲು ಬೇತೇಲ್ ಮತ್ತು ದಾನ್ ನಗರಗಳಿಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:30
9 ತಿಳಿವುಗಳ ಹೋಲಿಕೆ  

ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ


ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.


ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು