Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅವನಿಗೆ, “ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು, “ನೀವು ಈ ದಿನ ಜನರ ಮಾತನ್ನು ಕೇಳಿ ಅವರಿಗೆ ವಿನಯರಾಗಿ, ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಅವನಿಗೆ - ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ ಅವರಿಗೆ ಒಳಗಾಗಿ ಒಳ್ಳೇ ಉತ್ತರಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಹಿರಿಯರು, “ಇಂದು ನೀನು ಅವರಿಗೆ ಸೇವಕನಂತೆ ಇರುವುದಾದರೆ, ಅವರು ನಿನ್ನ ಸೇವೆಯನ್ನು ನಿಜವಾಗಿಯೂ ಮಾಡುತ್ತಾರೆ. ನೀನು ಅವರೊಂದಿಗೆ ಕರುಣೆಯಿಂದ ಮಾತಾಡಿದರೆ, ಅವರು ಎಂದೆಂದಿಗೂ ನಿನಗಾಗಿ ದುಡಿಯುತ್ತಾರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:7
9 ತಿಳಿವುಗಳ ಹೋಲಿಕೆ  

ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,


ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು