Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಆ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:19
10 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,


ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.


ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.


ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು