1 ಅರಸುಗಳು 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು. ಅಧ್ಯಾಯವನ್ನು ನೋಡಿ |