Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.


ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.


ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.


ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.


ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು