Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವದರಿಂದ ಇವನೊಬ್ಬನೇ ಸಮಾಧಿಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಸಮಸ್ತ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಳಿಡುವರು. ಏಕೆಂದರೆ, ಯಾರೊಬ್ಬಾಮನವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು. ಯಾರೊಬ್ಬಾಮನ ಮನೆಯವರೊಳಗೆ ಅವನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗಾದ ಒಳ್ಳೆಯ ಕ್ರಿಯೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:13
10 ತಿಳಿವುಗಳ ಹೋಲಿಕೆ  

ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.


ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.


ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,


ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.


ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು