1 ಅರಸುಗಳು 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು. ಅಧ್ಯಾಯವನ್ನು ನೋಡಿ |