Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ - ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷ ಮಾರ್ಪಡಿಸಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರ ಮೇಲೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:2
12 ತಿಳಿವುಗಳ ಹೋಲಿಕೆ  

ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,


ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು


ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.


ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.


ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.


ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.


ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.


ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.


ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು