Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನು ಇಪ್ಪತ್ತೆರಡು ವರ್ಷ ಆಳಿ ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಇಪ್ಪತ್ತೆರಡು ವರುಷ ಆಳಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರ್ಷಗಳಾಗಿದ್ದವು. ಅವನು ಮೃತನಾಗಿ, ತನ್ನ ಪಿತೃಗಳ ಜೊತೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:20
10 ತಿಳಿವುಗಳ ಹೋಲಿಕೆ  

ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.


ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.


ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.


ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು