1 ಅರಸುಗಳು 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |