Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:26
12 ತಿಳಿವುಗಳ ಹೋಲಿಕೆ  

ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು