Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರೆಹಬ್ಬಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ರೆಹಬ್ಬಾಮನ ಉಳಿದ ಕಾರ್ಯಗಳೂ, ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:29
22 ತಿಳಿವುಗಳ ಹೋಲಿಕೆ  

ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.


ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.


ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.


ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.


ಅಮಚ್ಯನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.


ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು