Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಕೆ ಅವನು ಹೇಳಿದಂತೆಯೇ ಮಾಡಿ ಶಿಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ನೋಡಲಾಗುತ್ತಿರಲಿಲ್ಲ; ಮುಪ್ಪಿನಿಂದ ಅವನ ಕಣ್ಣು ಮೊಬ್ಬಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿದ್ದದ್ದರಿಂದ ಕಾಣಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರೊಬ್ಬಾಮನ ಪತ್ನಿಯು ಹಾಗೆಯೇ ಮಾಡಿ, ಎದ್ದು ಶೀಲೋವಿಗೆ ಹೋಗಿ, ಅಹೀಯನ ಮನೆಗೆ ಬಂದಳು. ಆದರೆ ಅಹೀಯನಿಗೆ ಕಾಣಿಸಲಿಲ್ಲ, ವೃದ್ದಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿ ಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:4
12 ತಿಳಿವುಗಳ ಹೋಲಿಕೆ  

ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.


ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;


ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು