Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ - ಯಾರೊಬ್ಬಾಮನ ಹೆಂಡತಿಯೇ, ಬಾ; ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸಪ್ಪಳವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:6
25 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.


ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.


ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.


ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು


ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು