1 ಅರಸುಗಳು 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ - ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನನ್ನಾಗಿ ಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಹೀಗೆನ್ನುತ್ತಾನೆ: ‘ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಜನರೊಳಗಿಂದ ತೆಗೆದು ನಿನ್ನನ್ನು ಹೆಚ್ಚಿಸಿ, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿ ಮಾಡಿದೆನು. ಅಧ್ಯಾಯವನ್ನು ನೋಡಿ |