Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ ಅವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:8
9 ತಿಳಿವುಗಳ ಹೋಲಿಕೆ  

ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.


ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.


ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು