Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಯೆಹೋವನಿಗೆ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:14
14 ತಿಳಿವುಗಳ ಹೋಲಿಕೆ  

ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.


ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.


ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.


ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು