Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವನು ಸಿಂಹಾಸನದ ಮೇಲೆ ಕೂತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧು ವಿುತ್ರರನ್ನೂ ಸಂಹರಿಸಿದನು; ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:11
10 ತಿಳಿವುಗಳ ಹೋಲಿಕೆ  

ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.


ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.


ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.


ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ


ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು