Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಎರಡು ಪಕ್ಷಗಳುಂಟಾದವು; ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:21
12 ತಿಳಿವುಗಳ ಹೋಲಿಕೆ  

ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.


“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.


ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.


ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.


ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು