Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನಿಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಸಾಯಲಾಗಿ ಒಮ್ರಿಯೇ ಆಳುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:22
4 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.


ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.


ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು