1 ಅರಸುಗಳು 16:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |