Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಒಮ್ರಿಯ ಮಗ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಯೆಹೋವ ದೇವರ ಮುಂದೆ ಹೆಚ್ಚು ಕೆಟ್ಟತನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:30
11 ತಿಳಿವುಗಳ ಹೋಲಿಕೆ  

ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.


ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.


ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು