1 ಅರಸುಗಳು 17:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.