Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಲವು ದಿನಗಳಾದನಂತರ ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು; ಹುಡುಗನಿಗೆ ರೋಗವು ಹೆಚ್ಚಾದದರಿಂದ ಉಸಿರಾಡುವುದು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸ್ವಲ್ಪಕಾಲದ ತರುವಾಯ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:17
16 ತಿಳಿವುಗಳ ಹೋಲಿಕೆ  

ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.


ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,


ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.


ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು