1 ಅರಸುಗಳು 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇನು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.