Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:24
14 ತಿಳಿವುಗಳ ಹೋಲಿಕೆ  

ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ


ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.


ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು


ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.


ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.


ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.


ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು