Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತರುವಾಯ ಯೆಹೋವನು ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಅಡಗಿಕೊ. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:3
12 ತಿಳಿವುಗಳ ಹೋಲಿಕೆ  

ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.


ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.


ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.


ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.


ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.


ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ” ಅಂದನು.


ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು