Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನೇಕ ದಿವಸಗಳಾದನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರುಷದಲ್ಲಿ ಆತನು ಅವನಿಗೆ - ನೀನು ಹೋಗಿ ಅಹಾಬನನ್ನು ಕಾಣು; ನಾನು ದೇಶಕ್ಕೆ ಮಳೆ ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:1
18 ತಿಳಿವುಗಳ ಹೋಲಿಕೆ  

ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;


ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,


ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.


ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು