Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:18
23 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.


ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.


ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, “ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.


ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.


ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.


ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು