1 ಅರಸುಗಳು 18:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು. ಅಧ್ಯಾಯವನ್ನು ನೋಡಿ |
ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.