1 ಅರಸುಗಳು 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿ |