1 ಅರಸುಗಳು 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ ಅಂದನು. ಎಲ್ಲಾ ಜನರೂ - ಸರಿ, ನೀನು ಹೇಳಿದಂತೆಯೇ ಆಗಲಿ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು. ಅಧ್ಯಾಯವನ್ನು ನೋಡಿ |