Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯಮಾಡಿ - ಗಟ್ಟಿಯಾಗಿ ಕೂಗಿರಿ; ಅವನು ದೇವರಾಗಿರುತ್ತಾನಲ್ಲಾ! ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:27
19 ತಿಳಿವುಗಳ ಹೋಲಿಕೆ  

ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.


ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.


ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;


ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.


ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.


ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.


ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.


ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.


ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು