Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:36
46 ತಿಳಿವುಗಳ ಹೋಲಿಕೆ  

ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.


ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.


ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.


ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.


ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.


ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.


ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.


ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,


ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;


ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.


ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.


ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.


ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.


ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು