Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 (ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 (ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:4
18 ತಿಳಿವುಗಳ ಹೋಲಿಕೆ  

ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.


ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.


ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು