Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವನು ತನ್ನ ಸೇವಕನಿಗೆ - ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು ಏನೂ ತೋರುವದಿಲ್ಲ ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಎಲೀಯನು ತನ್ನ ಸೇವಕನಿಗೆ, “ಸಮುದ್ರದ ಕಡೆಗೆ ನೋಡು” ಎಂದು ಹೇಳಿದನು. ಸಮುದ್ರವು ಕಾಣುವ ಸ್ಥಳಕ್ಕೆ ಆ ಸೇವಕನು ಹೋದನು. ನಂತರ ಸೇವಕನು ಹಿಂದಿರುಗಿ ಬಂದು, “ನನಗೆ ಏನೂ ಕಾಣುತ್ತಿಲ್ಲ” ಎಂದನು. ಎಲೀಯನು ಆ ಸೇವಕನಿಗೆ, “ಹೋಗಿ ಮತ್ತೆ ನೋಡು” ಎಂದನು. ಹೀಗೆ ಆ ಸೇವಕನು ಏಳು ಸಲ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:43
11 ತಿಳಿವುಗಳ ಹೋಲಿಕೆ  

ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.


ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು