Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಂಚಾರಕ್ಕಾಗಿ ದೇಶವನ್ನು ಎರಡು ಭಾಗಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಂತೆಯೇ ನೀರನ್ನು ಕಂಡುಕೊಳ್ಳಲು ದೇಶದ ಒಂದು ಕಡೆಗೆ ಅಹಾಬನು, ಮತ್ತೊಂದು ಕಡೆಗೆ ಓಬದ್ಯನು ಹೊರಟರು. ಅವರಿಬ್ಬರೂ ದೇಶವನ್ನೆಲ್ಲಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:6
3 ತಿಳಿವುಗಳ ಹೋಲಿಕೆ  

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.


ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು