Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲ್ಯರ ಅರಸನನ್ನಾಗಿಯೂ ಅಬೇಲ್‍ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭೀಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:16
11 ತಿಳಿವುಗಳ ಹೋಲಿಕೆ  

ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.


ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.


ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.


ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.


ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು