Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿ ಇಸ್ರಾಯೇಲ್ಯರನ್ನು ಉಳಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:18
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು