Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:9
9 ತಿಳಿವುಗಳ ಹೋಲಿಕೆ  

ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.


ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.


ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.


ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು