Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗ ಸೊಲೊಮೋನನು ತನ್ನ ತಂದೆಯ ಸಿಂಹಾಸನದ ಮೇಲೆ ಕುಳಿತು ಆಡಳಿತ ನಡೆಸತೊಡಗಿದನು. ರಾಜ್ಯವು ಅವನ ಪೂರ್ಣ ಹತೋಟಿಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:12
13 ತಿಳಿವುಗಳ ಹೋಲಿಕೆ  

ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.


ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”


ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.


ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ” ಎಂದು ವಿಜ್ಞಾಪಿಸಿದನು.


ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.


ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.


ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.


ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು