1 ಅರಸುಗಳು 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ - ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ; ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ರಾಜನಾದ ಸೊಲೊಮೋನನು ತನ್ನ ತಾಯಿಗೆ, “ಅಬೀಷಗಳನ್ನು ಅವನಿಗೆ ಕೊಡು ಎಂಬುದಾಗಿ ನೀನೇಕೆ ನನ್ನನ್ನು ಕೇಳುತ್ತಿರುವೆ? ಅವನು ನನ್ನ ಹಿರಿಯಣ್ಣನಾಗಿರುವುದರಿಂದ ಅವನನ್ನೇ ರಾಜನನ್ನಾಗಿ ಮಾಡೆಂದು ನೀನು ಕೇಳದಿರುವುದೇಕೆ? ಯಾಜಕನಾದ ಎಬ್ಯಾತಾರನೂ ಯೋವಾಬನೂ ಅವನಿಗೆ ಬೆಂಬಲವನ್ನು ನೀಡಿದರು!” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು. ಅಧ್ಯಾಯವನ್ನು ನೋಡಿ |