Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ ಬಲಪಡಿಸಿ ತಾನು ವಾಗ್ದಾನಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈಹೊತ್ತೇ ಸಾಯಬೇಕು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:24
19 ತಿಳಿವುಗಳ ಹೋಲಿಕೆ  

ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.


ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.


ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.


ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,


ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.


ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.


ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು